Belagavi NewsBelgaum NewsKannada NewsKarnataka News

*ಕಾಳಿ ನದಿಯಲ್ಲಿ ಮುಳಗಿ ಒಂದೆ ಕುಟುಂಬದ 6 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆ ಹೊಗಿದ್ದ ಒಂದೆ ಕುಟುಂಬದ 6 ಜನರು ಕಾಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ನಡೆದಿದೆ.‌

Home add -Advt

ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು. ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದದಲ್ಲಿ ಪ್ರವಾಸಕ್ಕೆ ತೆರಳಿದ್ದಾಗ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ಕಾಳಿ ನದಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ.

ನಜೀರ್ ಅಹ್ಮದ್(40), ಅಲ್ಲೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ ಅಹ್ಮದ್(15), ಅಬೀದ್ ಅಹ್ಮದ್(12) ಮೃತರು. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರ ಮಾಡಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button