*ಸಿಲಿಂಡರ್ ಸ್ಫೋಟಕ್ಕೆ ಒಂದೇ ಕುಟುಂಬದ 6 ಮಂದಿ ಗಾಯ*: *ತಾಯಿ, ಮಗುವಿನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಬೆಳಗಿನ ಜಾವ ಮನೆಯಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗ್ಯಾಸ್‌ ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಂಪತಿ ಹಾಗೂ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದಿದೆ. ರಾಯಚೂರು ಮೂಲದ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಕರಿಲಿಂಗಪ್ಪ (40) ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಸುಮಾರು … Continue reading *ಸಿಲಿಂಡರ್ ಸ್ಫೋಟಕ್ಕೆ ಒಂದೇ ಕುಟುಂಬದ 6 ಮಂದಿ ಗಾಯ*: *ತಾಯಿ, ಮಗುವಿನ ಸ್ಥಿತಿ ಗಂಭೀರ*