
ಪ್ರಗತಿವಾಹಿನಿ ಸುದ್ದಿ: ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಎನ್ ಕೌಂತರ್ ಬಳಿಕ ಇದೀಗ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದು, ನಕ್ಸಲರನ್ನು ಮುಖ್ಯವಾಹಿನಿಗೆ ಅರುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭವಾಗಿದೆ.
ಚಿಕ್ಕಮಗಳೂರು ಭಾಗದ ಕಾಡಿನಲ್ಲಿ ಅವಿತುಕೊಂಡಿರುವ ಮೋಸ್ಟ್ ವಾಟೆಂಡ್ ನಕ್ಸಲರು ಶರಣಗಾಲು ಮುಂದಾಗಿದ್ದಾರೆ. ಮುಂಡಗಾರು ಲತಾ, ಸುಂದರಿ ಕಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಶರಣಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಪ್ತಚರ ಇಲಾಖೆ ಅಧಿಕಾರಿಗಳ ಜೊತೆ ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಕರಿಕ ವೇದಿಕೆ ಸದಸ್ಯರು ಸಭೆ ನಡೆಸಿದ್ದು, ಮೂರು ದಿನಗಳೊಳ್ಗಾಗಿ 6 ನಕ್ಸಲರು ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ