Karnataka News

*ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರು ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರಿನ ಕಾಡಿನಲ್ಲಿ ಅಡಗಿ ಕುಳಿತಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದ ಬೆನ್ನಲ್ಲೇ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಜನವರಿ 8ರಂದು 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದರು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಪೊಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ನಕ್ಸಲರು ಶರಣಾಗಿದ್ದರು. ಇಂದು 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ನ್ಯಾಯಾಲಯ ಎಲ್ಲಾ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರಿಗೆ ಜನವರಿ 31ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button