ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಮಧ್ಯರಾತ್ರಿ ಕಟಕೋಳ ಬಳಿ ಸಂಭವಿಸಿದ ಭೀಕರ ಅಪಘಾತಕ್ಕೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೊರಟಿದ್ದ 6 ಜನರು ಮೃತರಾಗಿದ್ದಾರೆ.
ಮಹೀಂದ್ರಾ ವಾಹನ ಮರಕ್ಕೆ ಡಿಕ್ಕಿಯಾಗಿ ಈ ಅಇವಘಡ ಸಂಭವಿಸಿದೆ. ಮೃತರೆಲ್ಲರೂ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದವರು.
ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯ ಚಂಚನೂರು ವಿಠ್ಠಲ ದೇವಸ್ಥಾನದ ಬಳಿ ಆಲದಮರಕ್ಕೆ ಮಹೀಂದ್ರಾ ಗಾಡಿ ಗುದ್ದಿದೆೆ. ಪರಿಣಾಮ 5 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಓರ್ವ ಆಸ್ಪತ್ರೆಯಲ್ಲಿ ಮೃತನಾಗಿದ್ದಾನೆ.
ಹನುಮವ್ವ (25), ದೀಪಾ (31), ಸವಿತಾ (17), ಮಾರುತಿ 42, ಇಂದ್ರವ್ವ(24), ಸುಪ್ರಿತಾ (11), ಗಾಯಾಳುಗಳನ್ನು ಗೋಕಾಕದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ
: ರಾಮದುರ್ಗ ತಾಲ್ಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ.
ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಮಹೇಂದ್ರ ಗೂಡ್ಸ್ ವಾಹನವು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಹುಲಕುಂದ ಗ್ರಾಮದ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುತ್ತಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಹದಿನಾರು ಜನರಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.
ಉಸ್ತುವಾರಿ ಸಚಿವರ ಸಾಂತ್ವನ:
ಅಪಘಾತದಲ್ಲಿ ಮೃತಪಟ್ಟಿರುವವರ ಆತ್ಮಕ್ಕೆ ಭಗವಂತ ಚಿರಶಾಂತಿ ದಯಪಾಲಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬದ ದುಃಖದಲ್ಲಿ ತಾವೂ ಭಾಗಿಯಾಗಿದ್ದೇನೆ ಎಂದು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.
ಗಾಯಾಳುಗಳು ಆದಷ್ಟು ಬೇಗನೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.
ಸಚಿವರು ಆಡುವ ಮಾತೆಲ್ಲ ಸರ್ಕಾರದ ಅಭಿಪ್ರಾಯವೇ ? ಕೋರ್ಟ್ ತೀರ್ಪು ಏನಿದೆ ?
https://pragati.taskdun.com/supreme-court-directions-on-ministers-and-mla-public-speech/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ