Latest

6 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ಅಟ್ಟಹಾಸ; 5 ಆಸ್ಪತ್ರೆಗೆ ಅಲೆದರೂ ಬದುಕುಳಿಯಲಿಲ್ಲ ಮಗು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಬಾಲಕಿ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಮೆಡ್ಚಲ್ ಜಿಲ್ಲೆಯಲ್ಲಿ ಸುಮಾರು ನಾಲ್ಕೈದು ಬೀದಿ ನಾಯಿಗಳು ದಾಳಿ ನಡೆಸ್ವೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಮೊದಲಿಗೆ ಆದಿತ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. 2 ಗಂಟೆಗಳ ನಂತರ ಆಸ್ಪತ್ರೆಯವರು ಅಂಕುರಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.

ಅದರಂತೆಯೇ ಕುಟುಂಬದವರು ತಕ್ಷಣ ಆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮೂರು ಗಂಟೆಗಳ ಚಿಕಿತ್ಸೆಯ ನಂತರ ಬಾಲಕಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ಬಾಲಕಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಬಳಿಕ ಕುಟುಂಬವರು ಮತ್ತೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೊನೆಗೆ ಬಾಲಕಿಯನ್ನು ನಿಲೌಫರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆ.ಬಾಲಕಿ ಸಾಯುವ ಮುನ್ನ ಸುಮಾರು 5 ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಲಾಗಿದೆ. ಆದಾಗ್ಯೂ ಬಾಲಕಿ ಸಾವನ್ನಪ್ಪಿದ್ದಾಳೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಬೋಡುಪ್ಪಲ್ ಮಹಾನಗರ ಪಾಲಿಕೆ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಬಾಲಕಿಯ ಅಂತ್ಯಕ್ರಿಯೆಗೆ ನಿಗಮವು ಹಣಕಾಸಿನ ನೆರವು ನೀಡಿಲ್ಲ. ಬದಲಿಗೆ ಕುಟುಂಬದವರನ್ನು ಸೋಮವಾರ ಬರುವಂತೆ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

Home add -Advt

Related Articles

Back to top button