*ನೀರಿನ ಸಂಪಿಗೆ ಬಿದ್ದು 6 ವರ್ಷದ ಬಾಲಕ ಸಾವು*: *ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ವೇಳೆ ಆಯತಪ್ಪಿ ತೆರೆದಿದ್ದ ನೀರಿನ ಸಂಪಿಗೆ ಬಿದ್ದ 6 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಬಾಲಕ ಕೊನೆಯುಸಿರೆಳೆದಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಬ್ಬಳ್ಳಿ ಉಣಕಲ್ ಗ್ರಾಮದ ಗಣೇಶ್ ಕಾಲೋನಿ ನಿವಾಸಿ ಸಿದ್ಧಾರ್ಥ್ ಮೃತ ಬಾಲಕ. ಪ್ರಥಮ ತರಗತಿಯಲ್ಲಿ ಓದುತ್ತಿದ್ದ ಸಿದ್ಧಾರ್ಥ್, ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ನೀರು ತೆಗೆಯಲು ತೆರೆದಿದ್ದ ಸಂಪಿನಲ್ಲಿ ಆಕಸ್ಮಿಕವಾಗಿ ಬಿದ್ದಿದ್ದಾನೆ. ಬಾಲಕ ಸಂಪಿಗೆ ಬಿದ್ದಿರುವುದನ್ನು ಗಮನಿಸಿದ ತಂದೆ ನಾಗಪ್ಪ … Continue reading *ನೀರಿನ ಸಂಪಿಗೆ ಬಿದ್ದು 6 ವರ್ಷದ ಬಾಲಕ ಸಾವು*: *ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ*