CrimeKarnataka NewsLatest

*ಆರು ವರ್ಷದ ಬಾಲಕಿ ಕೊಲೆಗೈದು ನೀಲಗಿರಿ ತೋಪಿನಲ್ಲಿ ಬಿಸಾಕಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಆರು ವರ್ಷದ ಪುಟ್ಟ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದುರುವ ದುಷ್ಕರ್ಮಿಗಳು ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ಹೋಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ದಂಪತಿಯ ಪುತ್ರಿ ಕೊಲೆಯಾದ ಬಾಲಕಿ. ಎರಡು ದಿನಗಳಿಂದ ಬಾಲಕಿ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು.

ಈ ವೇಳೆ ಬಾಲಕಿ ವಿಠಸಂದ್ರದ ನೀಲಗಿರಿ ತೋಪಿನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕತ್ತು ಬಿದಿ ಬಾಲಕಿಯನ್ನು ಯಾತ್ರೋ ಕೊಲೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿ, ಕುತ್ತಿಗೆ ಬಿಗಿದು ಕೊಲೆಗೈದು ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ಗೊತ್ತಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button