*ಆರು ವರ್ಷದ ಬಾಲಕಿ ಕೊಲೆಗೈದು ನೀಲಗಿರಿ ತೋಪಿನಲ್ಲಿ ಬಿಸಾಕಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಆರು ವರ್ಷದ ಪುಟ್ಟ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದುರುವ ದುಷ್ಕರ್ಮಿಗಳು ಶವವನ್ನು ನೀಲಗಿರಿ ತೋಪಿನಲ್ಲಿ ಬಿಸಾಕಿ ಹೋಗಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ದಂಪತಿಯ ಪುತ್ರಿ ಕೊಲೆಯಾದ ಬಾಲಕಿ. ಎರಡು ದಿನಗಳಿಂದ ಬಾಲಕಿ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆ ಬಾಲಕಿ ವಿಠಸಂದ್ರದ ನೀಲಗಿರಿ ತೋಪಿನಲ್ಲಿ ಶವವಾಗಿ … Continue reading *ಆರು ವರ್ಷದ ಬಾಲಕಿ ಕೊಲೆಗೈದು ನೀಲಗಿರಿ ತೋಪಿನಲ್ಲಿ ಬಿಸಾಕಿದ ದುಷ್ಕರ್ಮಿಗಳು*