
ಪ್ರಗತಿವಾಹಿನಿ ಸುದ್ದಿ: 6 ವರ್ಷದ ಬಾಲಕಿ ಮೇಲೆ ದುರುಳರು ಅತ್ಯಾಚರವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರೈಲು ನಿಲ್ದಾಣದಲ್ಲಿ ನಡೆದಿದೆ.
ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬವೊಂದರ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದು, ಹತ್ಯೆ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.