Karnataka News
*ಬೇಕರಿಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು*

ಪ್ರಗತಿವಾಹಿನಿ ಸುದ್ದಿ: ಬೇಕರಿಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾಅರಟಗಿಯಲ್ಲಿ ನಡೆದಿದೆ.
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿ ಬೇಕರಿ ಒಳಗೆ ಕರೆದೊಯ್ದ ಆರೋಪಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಚೀರಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಸ್ಥಳಕ್ಕಾಗಮಿಸಿದಾರೆ. ಕಾಮುಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಹಮ್ಮದ್ ಬಂಧಿತ ಆರೋಪಿ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.