Karnataka NewsLatestPolitics

*ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಹೊಸ ಭವಿಷ್ಯ ನುಡಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

Home add -Advt

ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು ಸುಲಭವಾಗಿ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ತಿಳಿಸಿದ್ದಾರೆ.


Related Articles

Back to top button