Kannada NewsKarnataka NewsNationalPolitics

*ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣ ವಾಪಸ್*

ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್‌, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್‌ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್‌ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

Home add -Advt

Related Articles

Back to top button