ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ಶ್ರೀ ಮಹಾಂತ ಶಿವಯೋಗಿಗಳ 47ನೇ ವಾರ್ಷಿಕ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ “ತ್ರಿಶುಂಗಪುರ ಉತ್ಸವ-2019” ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಹಿಳಾಗೋಷ್ಠಿ ಉದ್ಧೇಶಿಸಿ ಮಾತನಾಡುತ್ತ, ಈ ದೇಶದ ಸಂಸ್ಕ್ರತಿಯನ್ನು ಬೆಳೆಸಲು ಮಹಿಳೆಯರ ಕೊಡುಗೆ ಅಪಾರವಾದದ್ದು. ಮಹಿಳೆಯ ತ್ಯಾಗ, ಸಹನೆ, ಮಮತೆ, ಪ್ರೀತಿ ವಾತ್ಸಲ್ಯದಿಂದಲೇ ದೇಶ ನಿಂತಿದೆ. ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಲವಾರು ಮಠಾಧೀಶರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.