Latest

ಇದ್ದಕ್ಕಿದ್ದಂತೆ ನಾಪತ್ತೆಯಾದ 7 ಮಕ್ಕಳು; ಕಂಗಾಲಾದ ಪೋಷಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಜಾನೆ ಆಟವಾಡಲೆಂದು ಮನೆಯಿಂದ ಹೊರಗೆ ಹೋದ 7 ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಹೆಸರುಘಟ್ಟ ರಸ್ತೆಯ ಸೌಂದರ್ಯ ಲೇಔಟ್ ನ ಐವರು ಬಾಲಕರು ಹಾಗೂ ಎಜಿಬಿ ಲೇಔಟ್ ನ ಇಬ್ಬರು ಬಾಲಕಿಯರು ಸೇರಿ ಒಟ್ಟು 7 ಮಕ್ಕಳು ನಾಪತ್ತೆಯಾಗಿದ್ದಾರೆ.

Home add -Advt

ತಮಗೆ ಓದಿನಲ್ಲಿ ಆಸಕ್ತಿ ಇಲ್ಲ, ಸ್ಫೋರ್ಟ್ಸ್ ನಲ್ಲಿ ಹೆಚ್ಚಿನ ಆಸಕ್ತಿಯಿದೆ ಎಂದು ಮಕ್ಕಳು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಂಗಾಲಾಗಿರುವ ಪೋಷಕರು ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಪೊಲೀಸ್ ಠಾಣೆಗಳಿಗೂ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ರವಾನಿಸಿದ್ದು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಉದ್ಯಾನವನಗಳಲ್ಲಿ ಮಕ್ಕಳಿಗಾಗಿ ಶೋಧ ನಡೆಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸ್ಫೋಟಕ ತಿರುವು

Related Articles

Back to top button