Latest

*ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಣ, ವಿಮಾನಗಳಿಗೆ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಸಂದೇಶ ರವಾನಿಸಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ವಿಮಾನವನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ವಿಮಾನ ಸಂಚಾರ ಯಥಾಸ್ಥಿತಿಯಲ್ಲಿ ಆರಂಭಗೊಂಡಿದೆ.


Related Articles

Back to top button