ಪ್ರಗತಿವಾಹಿನಿ ಸುದ್ದಿ: ಪುಟ್ಟ ಕಂದಮ್ಮನನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಪೋಷಕರೇ ಬಿಟ್ಟುಹೋಗಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.
ವಿಜಯಪುರದ ಆಶ್ರಮ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಹೆಣ್ಣುಮಗು ಪತ್ತೆಯಾಗಿದೆ. ಬಟ್ಟೆಯಲ್ಲಿ ಸುತ್ತಿಟ್ಟು ಮಗುವನ್ನು ಕಟ್ಟಡಲ್ಲಿ ಬಿಟ್ಟು ಹೋಗಿದ್ದಾರೆ.
ಇಂದು ಬೆಳಿಗ್ಗೆ ಸ್ಥಳೀಯರು ವಾಯು ವಿಹಾರಕ್ಕೆಂದು ತೆರಳುತ್ತಿದ್ದ ವೇಳೆ ಮಗುವಿನ ಅಳುವಿನ ಶಬ್ದ ಕೇಳಿದೆ. ಕಟ್ಟದ ಬಳಿ ಬಂದು ನೋಡಿದಾಗ ಬಟ್ಟೆಯಲ್ಲಿ ಸುಟ್ಟಿಟ್ಟ ರೀತಿಯಲ್ಲಿ ಹೆಣ್ಣುಮಗು ಪತ್ತೆಯಾಗಿದೆ.
ಕೂಡಲೇ ಆದರ್ಶ ನಗರ ಠಾಣೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಗುವನ್ನು ರಕ್ಷಿಸಿ ಹಾಲುಣಿಸಿ, ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರ ವಶಕ್ಕೆ ನೀಡಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ