Latest

7 ವೇತನ ಆಯೋಗ: ಸರಕಾರಿ ನೌಕರರ ಮುಷ್ಕರ ಫಿಕ್ಸ್?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದಾನಸಭೆಯಲ್ಲಿ ನೀಡಿದ ಭರವಸೆ ಸಮಾಧಾನ ತರದ ಹಿನ್ನೆಲೆಯಲ್ಲಿ ಮಾ.1ರಂದು ಮುಷ್ಕರ ನಡೆಸಲು ತಳೆದ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ವರದಿ ಸರಕಾರದ ಮುಂದಿದ್ದು ಯಾವುದೇ ವಿಳಂಬವಿಲ್ಲದೆ ಸರಕಾರ ತನ್ನ ನಿರ್ಧಾರ ಪ್ರಕಟಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಅಸ್ಪಷ್ಟ ನಿಲುವು ಸಮಾಧಾನಕರವಾಗಿಲ್ಲ. ಮುಖ್ಯಮಂತ್ರಿಗಳು ಸ್ಪಷ್ಟ ನಿಲುವು ಪ್ರಕಟಿಸಿದರೆ ಮಾತ್ರ ಮುಷ್ಕರ ಹಿಂಪಡೆಯಲಾಗುವುದು. ಇಲ್ಲವಾದಲ್ಲಿ ಮುಷ್ಕರಕ್ಕಿಳಿಯುವುದು ನಿಶ್ಚಿತ ಎಂದು ಷಡಾಕ್ಷರಿ ಹೇಳಿದರು.

ಮಾರ್ಚ್ ಅಂತ್ಯದೊಳಗೆ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅದರ ಶಿಫಾರಸುಗಳನ್ನು ಜಾರಿಗೊಳಿಸಲು ಹಾಗೂ ಈ ಬಗ್ಗೆ ಸರಕಾರಿ ನೌಕರರೊಂದಿಗೆ ಸಮಾಲೋಚಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಈ ಮೊದಲು ವಿಧಾನಸಭೆಯಲ್ಲಿ ಹೇಳಿದ್ದರು. ಆದರೆ ಮಾತು ಉಳಿಸಿಕೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಅವರು ದೂರಿದರು.

ಮಾರ್ಚ್ ತಿಂಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಶಿಕ್ಷಕರು ಮುಷ್ಕರ ನಿರತರಾದಲ್ಲಿ ವಿದ್ಯಾರ್ಥಿಗಳ ಭವಿಷ್ಯವೇನು ಎಂಬ ಬಗ್ಗೆ ಇದೀಗ ಆತಂಕ ವ್ಯಕ್ತವಾಗಿದ್ದು ಸರಕಾರದ ನಡೆ, ನಿರ್ಧಾರಗಳು ಎಲ್ಲವನ್ನೂ ನಿರ್ಧರಿಸಲಿವೆ.

*ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಜನರ ದುರ್ಮರಣ*

https://pragati.taskdun.com/chattisgharaccident11-death/

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, 1 ಕೋಟಿ ರೂ. ದಂಡ

https://pragati.taskdun.com/10-years-imprisonment-rs-1-crore-if-question-paper-is-leaked-fine/

ರಮೇಶ ಜಾರಕಿಹೊಳಿ ಸುತ್ತ ಆಕಾಂಕ್ಷಿಗಳ ದಂಡು; ಮಾಜಿ ಸಚಿವರ ಕೈಗೇ ಈ ಬಾರಿ ಬಿಜೆಪಿ ಬಿ ಫಾರ್ಮ್?

https://pragati.taskdun.com/crowd-of-aspirants-around-ramesh-jarakiholi-bjp-b-form-in-the-hands-of-former-minister/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button