ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪೊಲೀಸರೆ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ಇದು. ವಶಕ್ಕೆ ಪಡೆದಿದ್ದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಕಳೆದವಾರ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಗಾಂಜಾ ಮಾರಾಟಗಾರರ ಮೇಲೆ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ ಆರೋಪಿಗಳಿಂದ 1 ಕೆಜಿ ಗಾಂಜಾ ಸೀಜ್ ಮಾಡಿದ್ದರು. ಆದರೆ ಪ್ರಕರಣ ದಾಖಲಿಸದೇ ಹಣ ಪಡೆದು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದರು. ನಂತರ ವಶಕ್ಕೆ ಪಡೆದಿದ್ದ ಗಾಂಜಾವನ್ನು ಪೊಲೀಸರೆ ಮಾರಾಟ ಮಾಡಿದ್ದರು.
ಪೊಲಿಸರ ವಿರುದ್ಧ ಕೇಳಿಬಂದ ಆರೋಪಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನವನಗರ ಠಾಣೆ ಇನ್ಸ್ ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ ಐ ವಿಕ್ರಮ್ ಪಾಟೀಲ್ ಸೇರಿದಂತೆ 7 ಸಿಬ್ಬಂದಿಗಳನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.
ಚಿತ್ರರಂಗಕ್ಕೆ ಬಿಗ್ ಶಾಕ್; ಹಿರಿಯ ನಟ ಸತ್ಯಜಿತ್ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ