
ಪ್ರಗತಿವಾಹಿನಿ ಸುದ್ದಿ: ಮನೆಯಂಗದಲ್ಲಿದ್ದ ಗೇಟ್ ಮುರಿದುಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಇಲ್ಲಿನ ವಾಜರಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. 7 ವರ್ಷದ ಬಾಲಕಿ ಯಲ್ಲಮ್ಮ ಮೃತ ದುರ್ದೈವಿ. ರಾಯಚೂರು ಮೂಲದ ಮಂಕಪ್ಪ-ಮಲ್ಲಮ್ಮ ದಂಪತಿಯ ಪುತ್ರಿ.
ಮನೆಯಂಗದಲ್ಲಿದ್ದ ಗೇಟ್ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಏಕಾಏಕಿ ಮುರಿದು ಬಿದ್ದಿದೆ. ಗೇಟ್ ಅಡಿಗೆ ಸಿಲುಕಿದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ