
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎಎಸ್ ಅಧಿಕಾರಿಗಳ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲ ಕೆ.ಎ.ಎಸ್ ಅಧಿಕಾರಿಗಳಿಗೆ ಪದೋನ್ನತಿ ನೀಡಿದೆ.
ಹಲವು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಕೆಲ ಕೆ.ಎ.ಎಸ್ ಕಿರಿಯ ಅಧಿಕಾರಿಗಳನ್ನು ಹಿರಿಯ ಅಧಿಕಾರಿಗಳ ಹುದ್ದೆಗೆ ಪದ್ದೋನ್ನತಿ ಮಾಡಿ ನೇಮಕ ಮಾಡಿದೆ ಎಂದು ತಿಳಿದುಬಂದಿದೆ.
ವಿವಿಧ ಸಂಸ್ಥೆಗಳಿಗೆ ಒಟ್ಟು 75 ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೊನ್ನತಿ ನೇಮಕ ಮಾಡಲಾಗಿದೆ.