Kannada NewsLatest

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ; ಸಸಿ ನೆಟ್ಟು ಸಂಭ್ರಮಿಸಿದ ಜೊಲ್ಲೆ ದಂಪತಿ

40,000 ಸಸಿ ನೆಡುವ ಗುರಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: 75ನೇ ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತವಾಗಿ ಸಮಾಧಿ ಮಠದಿಂದ ದೇವಚಂದ ಕಾಲೇಜು ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ ಚಾಲನೆ ನೀಡಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಈ ಅಮೃತಮಹೋತ್ಸವದ ಸವಿನೆನಪಿಗಾಗಿ ನಿಪ್ಪಾಣಿ ಮತಕ್ಷೇತ್ರದಲ್ಲಿ ಸುಮಾರು 40,000 ಸಸಿ ನೆಡುವ ಗುರಿಯನ್ನು ಇಟ್ಟುಕೊಂಡಿದ್ದೇವೆ. ಜೀವಸಂಕುಲದ ಉಸಿರಾಗಿರುವ ಪ್ರಕೃತಿಯನ್ನು ಸಂರಕ್ಷಿಸೋಣ. ನಾಡು ಹಸಿರಾಗಲಿ. ಹಸಿರು ಉಸಿರಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಚಂದ್ರಕಾಂತ ಕೋಟಿವಾಲೆ, ಉಪಾಧ್ಯಕ್ಷರಾದ ಎಂ.ಪಿ.ಪಾಟೀಲ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ,ಉಪಾಧ್ಯಕ್ಷರಾದ ನೀತಾ ಬಾಗಡಿ,ಸದಸ್ಯರು,ಮಹಿಳಾ ಮೋರ್ಚಾದ ಸದಸ್ಯರು, ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಗೃಹ ಮಂತ್ರಿ ಅರಗಜ್ಞಾನೇಂದ್ರಗೆ ಪೊಲೀಸರ ಕಾಟ!

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button