Belagavi NewsBelgaum NewsKannada NewsKarnataka NewsPolitics

*77ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ನೆರವೇರಿಸಿದರು.

ಇಂದು ದೇಶದಾದ್ಯಂತ 77 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲೂ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. 

ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು.‌ ಧ್ವಜಾರೋಹಣ ಬಳಿಕ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು.‌ 

Home add -Advt

ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ ಸಂವಿಧಾನದ ಕೊಡುಗೆ: ಸಚಿವ ಸತೀಶ ಜಾರಕಿಹೊಳಿ


: ಬೆಳಗಾವಿಯ ಜಿಲ್ಲೆ ರಾ?ಪಿತ ಮಹಾತ್ಮಾ ಗಾಂಧೀಜಿ, ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.
ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ (ಜ.೨೬) ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾ? ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾ?ದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ಭವ್ಯ ಭಾರತಕ್ಕೆ ದಾರಿದೀಪವಾಗಿದೆ ಎಂದರು.
ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಈ ಐದೂ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅನು?ನಗೊಳಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಪಥಸಂಚಲನ;
ಕೆ.ಎಸ್.ಆರ್.ಪಿ ೨ನೇ ಪಡೆ ತುಕಡಿ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಭಾರತ ಸೇವಾದಳ, ಮಹೇಶ್ವರಿ ಅಂಧಮಕ್ಕಳ ಶಾಲಾ ವಿದ್ಯರ್ಥಿಗಳು ಸೇರಿದಂತೆ ವಿವಿಧ ಶಾಲೆ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.


ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶ:

ಆದರಣೀಯರೇ, ಬೆಳಗಾವಿ ಜಿಲ್ಲೆಯ ಸಮಸ್ತ ನಾಗರಿಕರೇ,
ಭಾರತ ರಾಷ್ಟ್ರವು ಗಣರಾಜ್ಯವೆಂದು ೧೯೫೦ರ ಜನವರಿ ೨೬ರಂದು ಘೋಷಿಸಿಕೊಂಡಿತು. ಗಣರಾಜ್ಯೋತ್ಸವದ ಅಮೃತ ಘಳಿಗೆಯಲ್ಲಿ ಇಂದಿನ ಸಂಭ್ರಮದಲ್ಲಿ ಭಾಗಿಯಾಗಿರುವ ಎಲ್ಲ ಹಿರಿಯರು, ಕವಿ-ಸಾಹಿತಿಗಳು, ಚಿಂತಕರು, ಜಿಲ್ಲೆಯ ಎಲ್ಲ ಶಾಸಕ ಮಿತ್ರರು, ಸಂಸದರು, ಜನಪ್ರತಿನಿಧಿಗಳು, ನಾಗರಿಕರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಬೆಳಗಾವಿಯ ಈ ನೆಲವು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ.
ಭಾರತ ರಾಷ್ಟ್ರವು ಗಣರಾಜ್ಯವೆಂದು ೧೯೫೦ರ ಜನವರಿ ೨೬ರಂದು ಘೋಷಿಸಿಕೊಂಡಿತು. ಈ ದಿನವು ದೇಶದ ನಾಗರಿಕರಿಗೆ ರಾಷ್ರ್ಟದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ಭವ್ಯಭಾರತಕ್ಕೆ ದಾರಿದೀಪವಾಗಿದೆ.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆದುಕೊಂಡ ಬಳಿಕ ಕೇವಲ ೭೭ ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟ್ರವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ.
ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೂಡ ಸರ್ವರಿಗೂ ಸಮಪಾಲು-ಸಮಬಾಳು ತತ್ವದಡಿ ಕಾರ್ಯನಿರ್ವಹಿಸುತ್ತಿದೆ. ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಈ ಐದೂ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಇತ್ತೀಚೆಗೆ ಅಂದಾಜು ೧೫೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇತ್ತೀಚೆಗೆ ಲೋಕಾರ್ಪಣೆಗೊಳಿಸಲಾಗಿದೆ.
ಅದೇ ರೀತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಆತನ ಸಂಗಡಿಗರನ್ನು ಬ್ರಿಟೀಷರು ನೇಣು ಹಾಕಿದ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ವೀರಭೂಮಿ ಹೆಸರಿನಲ್ಲಿ ಸಂಗೊಳ್ಳಿ ರಾಯಣ್ಣನ ಯಶೋಗಾಥೆ ಸಾರುವ ವಸ್ತುಸಂಗ್ರಹಾಲಯವನ್ನು ನಿರ್ಮಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ಕೆಲವೇ ದಿನಗಳ ಹಿಂದೆ ಉದ್ಘಾಟನೆ ನೆರವೇರಿಸಿರುತ್ತಾರೆ.
ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳಗಾವಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕಾಗಿ ಸುಮಾರು ಹತ್ತು ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ.
ಗಣರಾಜ್ಯೋತ್ಸವದ ಈ ಸಂದರ್ಭದಲ್ಲಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.


ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ೪.೨೪ ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, ಇಲ್ಲಿವರೆಗೆ ೪.೨೫ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದರೆ ಶೇ. ೧೦೦ ರಷ್ಟು ಹಿಂಗಾರು ಬೆಳೆಗಳ ಬಿತ್ತನೆಯಾಗಿರುತ್ತದೆ. ಬಿತ್ತನೆಗೆ ಬೇಕಾಗುವ ಉತ್ತಮ ಗುಣಮಟ್ಟದ ೨೪ ಸಾವಿರ ಕ್ವಿಂಟಲ್ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ೬೦ ಸಾವಿರ ರೈತರಿಗೆ ಸಕಾಲದಲ್ಲಿ ಪೂರೈಸಲಾಗಿದೆ. ಹಿಂಗಾರು ಬೆಳೆಗಳ ಬೆಳವಣಿಗೆ ಉತ್ತಮವಾಗಿರುತ್ತದೆ.
ಪ್ರಸಕ್ತ ಸಾಲಿನಲ್ಲಿ ಆಯವ್ಯಯದಲ್ಲಿ ಘೋಷಿಸಿರುವಂತೆ, ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಸುಮಾರು ೧೦೦೦ ಹೆಕ್ಟೇರ್ ಕಬ್ಬು ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆಗಳನ್ನು ಜಾರಿಗೊಳಿಸಲಾಗಿರುತ್ತದೆ. ಸನ್ಮಾನ್ಯ ಮುಖ್ಯಮಂತ್ರಿಗಳು ಡಿಸೆಂಬರ್ ಮಾಹೆಯಲ್ಲಿ ನಮ್ಮ ಜಿಲ್ಲೆಯ ಬೆಳಗಾವಿ ತಾಲೂಕಿನ ಬೆಳಗಾವಿ ಶುಗರ‍್ಸ್. ಲಿ ಹುದಲಿ ಇವರ ಸಹಯೋಗದೊಂದಿಗೆ ಈ ಯೋಜನೆಗೆ ಚಾಲನೆ ನೀಡಿರುತ್ತಾರೆ.
ಬೆಳೆ ವಿಮೆ ಯೋಜನೆಯಡಿ ೨೦೨೪-೨೫ ನೇ ಸಾಲಿಗೆ ತೋಟಗಾರಿಕೆ ಬೆಳೆಗಳಿಗೆ ಮರುವಿನ್ಯಾಸಗೊಳಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಮತ್ತು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯಡಿ ೯೨೯೫ ರೈತರಿಗೆ ಒಟ್ಟು ೯೬.೩೬ ಕೋಟಿ ಮೊತ್ತದ ವಿಮೆ ಪರಿಹಾರ ವಿತರಿಸಲಾಗಿದೆ.
ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಠಿಯಿಂದಾಗಿ ಒಟ್ಟು ೩೮೭೦ ಜನ ರೈತರ ೩,೩೨೦ ಹೆಕ್ಟರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಸದರಿ ರೈತರಿಗೆ ಒಟ್ಟು ರೂ. ೫೨೩.೧೫ ಲಕ್ಷಗಳ ಬೆಳೆ ಹಾನಿ ಪರಿಹಾರಕ್ಕಾಗಿ ವರದಿ ಸಲ್ಲಿಸಲಾಗಿದೆ.


ಹಸಿವುಮುಕ್ತ ಕರ್ನಾಟಕ” ಇದು ನಮ್ಮ ಸರರ್ಕಾರದ ಮುಖ್ಯ ಧೈಯವಾಗಿದ್ದು, ಇದಕ್ಕಾಗಿ ರಾಜ್ಯ ಸರರ್ಕಾರವು ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗ್ಯಾರಂಟಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ.
ಜುಲೈ-೨೦೨೩ರ ಮಾಹೆಯಿಂದ ಐದು ಕೆ.ಜಿ ಅಕ್ಕಿಯ ಜೊತೆಗೆ ಇನ್ನುಳಿದ ಐದು ಕೆ.ಜಿಯ ಅಕ್ಕಿ ಮೊತ್ತಕ್ಕೆ ಸಮನಾಗಿ ಪಡಿತರ ಚೀಟಿಯ ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಗೆ ನೇರವಾಗಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ರೂ.೧೭೦ ರಂತೆ ಡಿ.ಬಿ.ಟಿ(ನೇರ ನಗದು ವರ್ಗಾವಣೆ) ಮೂಲಕ ಹಣ ಜಮೆ ಮಾಡಲಾಗಿರುತ್ತದೆ.
ಜುಲೈ ೨೦೨೩ ರಿಂದ ಡಿಸೆಂಬರ್ ೨೦೨೪ರ ವರೆಗೆ ೧೦೨೫ ಕೋಟಿ ಮೊತ್ತವನ್ನು ಜಿಲ್ಲೆಯ ಫಲಾನುಬವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದ್ದು, ಫೆಬ್ರವರಿ ೨೦೨೫ ರ ಮಾಹೆಯಿಂದ ಡಿ.ಬಿ.ಟಿ ಹಣದ ಬದಲಾಗಿ ಪ್ರತಿ ಫಲಾನುಭವಿಗೆ ೧೦ ಕೆ.ಜಿ ಅಕ್ಕಿಯನ್ನು ನೀಡಲಾಗುತ್ತಿದೆ.
ಗೃಹಲಕ್ಷ್ಮೀ ಯೋಜನೆಯಡಿ ೧೧,೮೭,೪೬೯ ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು, ಇಲ್ಲಿಯವರೆಗೆ ೧೧,೮೭,೧೭೯ ಫಲಾನುಭವಿಗಳು ನೋಂದಣಿಯಾಗಿರುತ್ತಾರೆ. ಇಲ್ಲಿಯವರೆಗೆ ಮಾಸಿಕ ರೂ.೨೦೦೦ ರಂತೆ ೨೪ ಕಂತುಗಳಿಗೆ ೫,೪೬೬ ಕೋಟಿ ಹಣ ಫಲಾನುಭವಿಗಳ ಬ್ಯಾಂಕ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆಯಾಗಿರುತ್ತದೆ.
ಗೃಹಜ್ಯೋತಿ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ೧೦.೫೨ ಲಕ್ಷ ಅರ್ಹ ಫಲಾನುಭವಿಗಳಿದ್ದು, ಸದರಿ ಯೋಜನೆಯಡಿಯಲ್ಲಿ ಒಟ್ಟು ೧೦.೨೮ ಲಕ್ಷ ಬಳಕೆದಾರರು ನೋಂದಾಯಿಸಿರುತ್ತಾರೆ. ಎಲ್ಲ ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯಡಿಯಲ್ಲಿ ಸರಾಸರಿ ಬಳಕೆಯ ಆಧಾರದ ಮೇಲೆ ಮಾಸಿಕ ೨೦೦ ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್‌ನ್ನು ನೀಡಲಾಗುತ್ತಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ವಿಭಾಗದಿಂದ ೨೦೨೫-೨೬ನೇ ಸಾಲಿನಲ್ಲಿ ಒಟ್ಟು ೨೧೧ ಕೋಟಿ ಅನುದಾನ ಅನುಮೋದನೆಗೊಂಡಿದ್ದು, ೮೮ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ೫೦ ರಿಂದ ೧೦೦ ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ೮೭೨ ಲಕ್ಷ, ರಾಮದುರ್ಗ ಮತ್ತು ಸವದತ್ತಿಯಲ್ಲಿ ತಾಲೂಕಾ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ೬೩ ಕೋಟಿ ಟೆಂಡರ ಪ್ರಕ್ರಿಯೆಯಲ್ಲಿ ಇರುತ್ತದೆ. ಬೆಳಗಾವಿಯಲ್ಲಿ ಬಿಮ್ಸ್ ಆವರಣದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ ಕೇಂದ್ರ ನಿರ್ಮಾಣ ಕಾಮಗಾರಿಗೆ ೩೫ ಟೆಂಡರ ಪ್ರಕ್ರಿಯೆಯಲ್ಲಿ ಇರುತ್ತದೆ.
ಶಕ್ತಿ ಯೋಜನೆಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ೧೫ ಬಸ್ ಘಟಕಗಳಿಂದ ೧೫೯೦ ಬಸ್‌ಗಳು ಪ್ರತಿ ದಿನ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆ ಪೂರ್ವದಲ್ಲಿ ಪ್ರತಿದಿನ ಸರಾಸರಿ ೫.೪೦ ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶಕ್ತಿ ಯೋಜನೆ ಪ್ರಾರಂಭದ ನಂತರ ಪ್ರತಿದಿನ ಸರಾಸರಿ ಒಟ್ಟು ೮.೦೫ ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ.
ಶಕ್ತಿ ಯೋಜನೆ ಪ್ರಾರಂಭವಾದ ನಂತರ ಶಕ್ತಿ ಯೋಜನೆಯ ಪೂರ್ವ ಹೋಲಿಕೆ ೨.೬೫ ಲಕ್ಷ ಪ್ರಯಾಣಿಕರ ಸಂಖ್ಯೆಯಲ್ಲಿ ಪ್ರತಿದಿನ ಹೆಚ್ಚಳವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಠಿಯಿಂದ ಅಂತರರಾಜ್ಯ ವೇಗದೂತ ಸಾರಿಗೆಗಳನ್ನು ಅವಶ್ಯಕತೆ ಅನುಸಾರ ರದ್ದುಪಡಿಸಿ ತಾಲೂಕು ಮತ್ತು ಹಳ್ಳಿ ಪ್ರದೇಶಗಳಲ್ಲಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೪೬೨೨೩ ಜನರು ನೋಂದಾಯಿಸಿಕೊಂಡಿದ್ದು, ಈ ಪೈಕಿ ೨೬,೩೬೪ ಜನರಿಗೆ ಡಿಬಿಟಿ ಮೂಲಕ ರೂ. ೭೮.೦೫ ಕೋಟಿ ಮೊತ್ತವನ್ನು ಪಾವತಿಸಲಾಗಿರುತ್ತದೆ. ಬಾಕಿ ಉಳಿದ ಅಭ್ಯರ್ಥಿಗಳ ಅರ್ಜಿಗಳು ೧೮೦ ದಿನ ಪೂರ್ಣಗೊಂಡಿರುವುದಿಲ್ಲ ಹಾಗೂ ಭೌತಿಕ ಪರಿಶೀಲನೆಗಾಗಿ ಉಳಿದಿರುತ್ತವೆ.
ಲೋಕೋಪಯೋಗಿ ಇಲಾಖೆಯಿಂದ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗಳ ಸುಧಾರಣೆ ಅಡಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ, ಒಟ್ಟು ೮೦.೭೪ ಕಿ.ಮೀ. ಉದ್ದದ ರಸ್ತೆಯನ್ನು ರೂ. ೧೬೨.೧೪ ಕೋಟಿಗಳ ಅನುದಾನದಲ್ಲಿ ೪೯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಒಟ್ಟು ೩೩.೯೨೮ ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಸಲಾಗಿದೆ. ಜಿಲ್ಲಾ ಮತ್ತು ಇತರೆ ರಸ್ತೆಗಳ ಸುಧಾರಣೆಗೆ ಕಳೆದ ೨ ವರ್ಷಗಳಲ್ಲಿ ಒಟ್ಟು ೨೭೩.೦೪ ಕಿ.ಮೀ. ಉದ್ದದ ರಸ್ತೆಯನ್ನು ರೂ. ೩೪೫.೭೫ ಕೋಟಿಗಳ ಅನುದಾನದಡಿ ೧೧೫ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಒಟ್ಟು ೮೬.೦೦ ಕಿ.ಮೀ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿಯು ರೂ.೧೦೦ ಕೋಟಿ ಅನುದಾನದಡಿ ಮಂಜೂರಾಗಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.
ಬೆಳಗಾವಿ ಜಿಲ್ಲಾಧಿಕಾರಿಗಳ ಕಟ್ಟಡ ನಿರ್ಮಾಣಕ್ಕೆ ರೂ. ೭೫.೦೦ ಕೋಟಿ (ಕಂದಾಯ ಇಲಾಖೆಯಿಂದ ೫೫ ಕೋಟಿ + ಲೋಕೋಪಯೋಗಿ ಇಲಾಖೆಯಿಂದ ೨೦ ಕೋಟಿ) ಮೊತ್ತದ ಡಿ.ಪಿ.ಆರ್ ತಯಾರಿಸಿ ಅನುಮೋದನೆ ಪಡೆಯಲಾಗಿದೆ. ಶೀಘ್ರವಾಗಿ ಟೆಂಡರ್ ಕರೆಯಲಾಗುವುದು.
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಹತ್ತಿರ ರೂ. ೩೫ ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ.
ಬೆಳಗಾವಿ ನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಿಕಾ ಭವನ ನಿರ್ಮಾಣಕ್ಕೆ ರೂ. ೯.೯೦ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಕರೆಯಲಾಗಿದೆ.
ಮಹಾನಗರ ಪಾಲಿಕೆಯ ವತಿಯಿಂದ ರೂ. ೨೭ ಕೋಟಿ ಅನುದಾನದಲ್ಲಿ ನಗರ ಎಲ್ಲ ವಾರ್ಡಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾiಗಾರಿಗಳಿಗೆ ಟೆಂಡರ ಟೆಂಡರ ಕರೆಯಲಾಗಿದ್ದು ಟೆಂಡರ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಮೃತ ಯೋಜನೆಯಲ್ಲಿ ೭ ಕೆರೆಗಳ ಪುನಶ್ಚೇತನ ಹಾಗೂ ೭ ಉದ್ಯಾನವನಗಳ ಸುಧಾರಣೆಗೆ ಒತ್ತು ನೀಡಲಾಗಿದ್ದು, ಈ ಪೈಕಿ ಕೋಟೆಕೆರೆ ಅಭಿವೃದ್ಧಿ ಹಾಗೂ ಪುನಶ್ಚೇತನ ಮಾಡುವ ಸಲುವಾಗಿ ರೂ. ೯.೨೦ ಕೋಟಿಗಳ ಅಂದಾಜು ಮೊತ್ತದ ಕಾಮಗಾರಿ ಪ್ರಗತಿಹಂತದಲ್ಲಿದೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ್ ಕೋರೆ, ಉತ್ತರ ಶಾಸಕ ಆಸೀಫ್ ಸೇಠ, ಜಿಲ್ಲಾಧಿಕಾರಿ ಮಹಮ್ಮದ ರೋಷನ್, ಪೊಲೀಸ್ ಕಮೀಷನರ್ ಭೂಷಣ್ ಬೊರಸೆ, ಎಸ್ಪಿ ಕೆ.ರಾಮರಾಜನ್, ಜಿ.ಪಂ ಸಿಇಓ ರಾಹುಲ್ ಶಿಂಧೆ, ಮೇಯರ್, ಪಾಲಿಕೆ ಸದಸ್ಯರು, ನೂರಾರು ವಿದ್ಯಾರ್ಥಿಗಳು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.‌


Related Articles

Back to top button