National

*7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿ*

ಪ್ರಗತಿವಾಹಿನಿ ಸುದ್ದಿ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿಯ ಕುಟುಂಬದವರು ಆರೋಪಿಯ ಮನೆಗೆ ಬೆಂಕಿ ಇಟ್ಟಿದ್ದಾರೆ

ಘಟನೆಯಿಂದ ಬಾಲಕಿಯ ಕುಟುಂಬ ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ, ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿದ್ದಾರೆ.  ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ‌.  ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಿ, ಶಾಂತಿ ಪುನಃ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button