ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವಿಶೇಷವಾದ ಮುಂಗಡ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆ ಇದೆ.
ಈ ಯೋಜನೆಯಡಿ ಕೇಂದ್ರ ಸರ್ಕಾರಿ ನೌಕರರಿಗೆ 10,000 ರೂ ನೀಡಲು ಚಿಂತನೆ ನಡೆಸಿದೆ. ಈ ಮೂಲಕ ಕೇಂದ್ರ ಸರ್ಕಾರ ತುಟ್ಟಿಭತ್ಯೆ-DAಯನ್ನು ಶೇ.3ರಷ್ಟು ಹೆಚ್ಚಿಸುವ ಸಾಧ್ಯತೆ.
ಕೇಂದ್ರ ಸರ್ಕಾರಿ ನೌಕರರು ಈಗಾಗಲೇ ಶೇ. 31ರಷ್ಟು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದು, 7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ಮಾತ್ರ ನೀಡಲಾಗುತ್ತದೆ. ಮಾರ್ಚ್ನಲ್ಲಿ ತುಟ್ಟಿ ಭತ್ಯೆ ಹೆಚ್ಚಳ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.
ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳ; ಯಾರ ಸಂಬಳ ಎಷ್ಟು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ