ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಬಣ ಬಡಿದಾಟ ಆರಂಭವಾಗಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಧ್ಯೆ ವಾಗ್ವಾದ ಆರಂಭವಾಗಿದೆ.
ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ನೌಕರರು ಮುಷ್ಕರ ಆರಂಭಿಸಿದ್ದರು. ಶೇ.17ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮುಷ್ಕರ ವಾಪಸ್ ಪಡೆಯುವುದಾಗಿ ಘೋಷಿಸಿದ್ದರು. ಈಗ ಷಡಕ್ಷರಿ ನಿರ್ಧಾರಕ್ಕೆ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಷಡಕ್ಷರಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ. ಹೋರಾಟದಲ್ಲಿ ರಾಜಕೀಯ ಸರಿಯಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಶೇ.25ರಷ್ಟಾದರೂ ವೇತನ ಹೆಚ್ಚಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಗುರುಸ್ವಾಮಿ ಹೇಳಿಕೆಗೆ ಷಡಕ್ಷರಿ ಕಿಡಿ ಕಾರಿದ್ದು, ಗುರುಸ್ವಾಮಿ ಒಬ್ಬ ಸರ್ಕಾರಿ ನೌಕರ. ಹಂಗಾಮಿ ಅಧ್ಯಕ್ಷ ಅಷ್ಟೇ. ಈ ಹಿಂದೆ ನಡೆದ ಸಭೆಯಲ್ಲಿ ಗುರುಸ್ವಾಮಿಯೂ ಇದ್ದರು. ಅವರು ಪ್ರಚಾರಕ್ಕಾಗಿ ಹೀಗೆ ಹೇಳುತ್ತಿದ್ದಾರೆ. ಹಂಗಾಮಿ ಅಧ್ಯಕ್ಷ ಅಷ್ಟೇ. ಸ್ವಯಂ ಘೋಷಿತ ಅಧ್ಯಕ್ಷ, ಚುನಾವಣೆಯಲ್ಲಿಯೇ ಸ್ಪರ್ಧಿಸಿಲ್ಲ. ಅವರ ಹೇಳಿಕೆಗೆ ಉತ್ತರಿಸುವ ಅಗತ್ಯವಿಲ್ಲ. ಈ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
*ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್; ಸಿ.ಎಸ್.ಷಡಕ್ಷರಿ ಘೋಷಣೆ*
https://pragati.taskdun.com/7th-pay-commissiongovt-employeesstrike-endc-s-shadakshari/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ