ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾಧ್ಯಂತ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದು, ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳೂ ಬಂದ್ ಆಗಿವೆ.
ಓಪಿಡಿ ಸೇರಿದಂತೆ ಬೇರೆಯಾವ ಸೇವೆಯೂ ಇರುವುದಿಲ್ಲ. ಮುಷ್ಕರದಲ್ಲಿ ಸರ್ಕಾರಿ ಕಚೇರಿ ಅಧಿಕಾರಿಗಳು, ವೈದ್ಯರು, ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರು ಭಾಗವಹಿಸಿರುವುದರಿಂದ ಆಸ್ಪತ್ರೆಗಳಲ್ಲಿ ರೋಗಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ರಾಜ್ಯಾದ್ಯಂತ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದು, ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಸರಕಾರಿ ನೌಕರರ ಮುಷ್ಕರ ಫಿಕ್ಸ್: ಷಡಕ್ಷರಿ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ