Latest

*ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ; ಸಿಎಂ ಬೊಮ್ಮಾಯಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರತಿಭಟನಾ ನಿರತ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಹೆಚ್ಚಳ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದರು.

ನೌಕರರು ಮುಷ್ಕರ ವಾಪಸ್ ಪಡೆಯುವಂತೆ ಮನವಿ ಮಾತನಾಡುತ್ತೇನೆ. ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರ ಸಂಘದ ಜೊತೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಲಾಗುವುದು. ಮಾತುಕತೆ ಬಳಿಕ ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಆದರೆ ಸರ್ಕಾರಿ ನೌಕರರು ಸರ್ಕಾರದ ನಿರ್ಧಾರಕ್ಕೆ ಒಪ್ಪುತ್ತಿಲ್ಲ, ಶೇ.20ರಷ್ಟನ್ನಾದರೂ ವೇತನ ಹೆಚ್ಚಳ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

Home add -Advt

*SSLC ಪೂರ್ವ ಸಿದ್ಧತಾ ಪರೀಕ್ಷೆಗೂ ತಟ್ಟಿದ ಮುಷ್ಕರದ ಬಿಸಿ; ಎಕ್ಸಾಂ ಮುಂದೂಡಿಕೆ*

https://pragati.taskdun.com/sslcpreparatory-exampost-ponestate-govt-employees/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button