
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರ ತಡೆಯುವ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಪ್ರಯತ್ನ ನಡೆಸಿದ್ದಾರೆ.
7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ, ಶೀಘ್ರ ಜಾರಿ ಮಾಡುತ್ತೇವೆ ಎಂದು ಪುನರುಚ್ಚರಿಸುವ ಮೂಲಕ ಸರ್ಕಾರಿ ನೌಕರರ ಪ್ರತಿಭಟನೆ ತಡೆಯಲು ಮುಂದಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಬಂದ ಕೂಡಲೇ ಜಾರಿಗೊಳಿಸಲಾಗುವುದು ಹಿರಿಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.
2023-24ನೇ ಸಾಲಿನಲ್ಲಿಯೇ ಮಧ್ಯಂತರ ವರದಿ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.
ವಿದೇಶದಲ್ಲಿ ನೌಕರಿ ಆಮಿಷವೊಡ್ಡಿ ವಂಚನೆ; ನೈಜಿರಿಯಾ ಪ್ರಜೆ ಅರೆಸ್ಟ್