ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಹಳೆ ಪಿಂಚಣಿ ನೀತಿ-OPS ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿರುವ ಸರ್ಕಾರಿ ನೌಕರರ ಸಂಘ, ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸರ್ಕಾರಿ ನೌಕರರ ಸಂಘದ ಜೊತೆ ಮಾತುಕತೆ ನಡೆಸಲು ತೀರ್ಮಾನಿಸಿದ್ದಾರೆ.
ಮುಷ್ಕರದಂತಹ ಆತುರದ ನಿರ್ಧಾರ ಬೇಡ, ಶೀಘ್ರದಲ್ಲಿಯೇ ಮಾತುಕತೆ ನಡೆಸುವುದಾಗಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಸಿಎಂ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಸಿಎಂ ಬೊಮ್ಮಾಯಿ ಅವರು ಬಳ್ಳಾರಿ ಜಿಲ್ಲಾ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸರ್ಕಾರಿ ನೌಕರರ ಸಂಘದ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
2 ಬೇಡಿಕೆ: ಮಾರ್ಚ್ 1ರಿಂದ ರಾಜ್ಯಾದ್ಯಂತ ಸರಕಾರಿ ನೌಕರರ ಅನಿರ್ಧಿಷ್ಟಾವದಿ ಮುಷ್ಕರ
https://pragati.taskdun.com/indefinite-strike-of-government-employees-across-the-state-from-march/
*ಕೌಟುಂಬಿಕ ಮೌಲ್ಯ, ಕುಟುಂಬದ ಉಳಿವಿಗಾಗಿ ಹೋರಾಟ; ಅಂತಹ ಮಹಿಳೆಯರಿಗೆ ಧ್ವನಿಯಾಗಿ ಎಂದ ಡಿ.ರೂಪಾ*
https://pragati.taskdun.com/d-rooparohini-sindhurifacebook-post/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ