ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದು ಖಚಿತವಾಗಿದೆ. ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರದ ನಡುವಿನ ಸಂಧಾನ ಮಾತುಕತೆ ವಿಫಲವಾಗಿದೆ.
ಮುಷ್ಕರ ಕೈಬಿಡುವಂತೆ ಮನವೊಲಿಸುವ ನಿಟ್ಟಿನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಪದಾಧಿಕಾರಿಗಳ ಸಭೆ ವಿಫಲವಾಗಿದೆ. ಕಾರ್ಯದರ್ಶಿಗಳ ಭರವಸೆಗೆ ಸರ್ಕಾರಿ ನೌಕರರ ಸಂಘ ಒಪ್ಪಿಲ್ಲ. ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರು ಮುಷ್ಕರ ನಡೆಸುವುದು ನಿಶ್ಚಿತವಾಗಿದೆ.
ಸಭೆ ಬಳಿಕ ಮಾತನಾಡಿದ ಸಿ.ಎಸ್.ಷಡಕ್ಷರಿ, ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಸಾಕಷ್ಟು ಬಾರಿ ಭರವಸೆಯನ್ನು ನೀಡಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದಿದ್ದಾರೆ.
*7ನೇ ವೇತನ ಆಯೋಗದ ವರದಿ ಜಾರಿ: ಡಿ.ಕೆ.ಶಿವಕುಮಾರ್ ಭರವಸೆ*
https://pragati.taskdun.com/7th-pay-commissiond-k-shivakumarhasana-prajadhwani/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ