Karnataka NewsNational

*ಕಟ್ಟಡ ಕುಸಿದು 8 ಜನರ ಸಾವು: ಪರಿಹಾರ ಘೋಷಣೆ ಮಾಡಿದ ಪ್ರಧಾನಿ*

ಪ್ರಗತಿವಾಹಿನಿ ಸುದ್ದಿ: ಮಳೆಗೆ 6 ಅಂತಸ್ತಿನ ನಿರ್ಮಾಣ ಹಂತದ ಬೃಹತ್ ಕಟ್ಟಡ ನೆಲಕ್ಕೆ ಉರುಳಿದ್ದು, 8 ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಈ ಘಟನೆಗೆ ಸಂಭಂದಿಸಿದಂತೆ ಇದೀಗ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿರುವ ಪ್ರಧಾನಿ ಮೋದಿಯವರು, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಬಿದ್ದು ಪ್ರಾಣಹಾನಿಯಾಗಿರುವುದು ಬಹಳ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವು ನನಗೆ ತಿಳಿದಿದೆ. ಗಾಯಾಳುಗಳನ್ನು ಆದಷ್ಟು ಬೇಗ ಚೇತರಿಸಿಕೊಳ್ಳಲಿ, ಮೃತರ ಕುಟುಂಬಕ್ಕೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡಲಾಗುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button