
ಪ್ರಗತಿವಾಹಿನಿ ಸುದ್ದಿ: ಸಂಸತ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ತೂರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಲೋಕಸಭೆ ಕಲಾಪದ ವೇಳೆ ವಿಪಕ್ಷ ಕಾಂಗ್ರೆಸ್ ನ ಸಂಸದರು ಸ್ಪೀಕರ್ ಓಂ ಬಿರ್ಲಾ ಮೇಲೆ ಕಾಗದದ ಚೂರು ತೂರಾಡಿಇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸತ್ ಬಜೆಟ್ ಅಧಿವೇಶನ ಮುಗಿಯುವವರೆಗೂ 8 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಾಣಿಕಮ್ ಟ್ಯಾಗೋರ್, ಗುರ್ಜಿತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್.ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಶ್ ಮತ್ತು ಪ್ರಶಾಂತ್ ಪಡೋಲೆ ಅಮಾನತುಗೊಂದ ಸಂಸದರು.
ಸಂದರ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರು ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ.




