
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
8 ವರ್ಷದ ಭವಿಷ್ ಮೃತ ಬಾಲಕ. ಟ್ರ್ಯಾಕ್ಟರ್ ರೋಟಾವೇಟರ್ ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿದೆ. ತಾಯಿ ಮಮತಾ ಜೊತೆ ಬಾಲಕ ಭವಿಷ್ ಅಜ್ಜಿ ಮನೆಗೆ ಬಂದಿದ್ದಾನೆ. ಈ ವೇಳೆ ಬಾಲಕ ತನ್ನ ಮಾವನ ಜೊತೆ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ.
ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಬಾಲಕ ಟ್ರ್ಯಾಕ್ಟರ್ ನಿಂದ ಇಳಿದಿದ್ದು, ಅಚಾನಕ್ ಆಗಿ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.
ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಾಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ