
ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಮನೆ ಮಾಲೀಕನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
35 ವರ್ಷದ ಹರೀಶ್ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ. ಬಾಲಕಿಯನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ ಒಂದು ತಿಂಗಳ ಹಿಂದಷ್ಟೇ ಬಾಡಿಗೆ ಮನೆಗೆ ಬಂದಿತ್ತು. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದಾಗ ಬಾಲಕಿ ಮೇಲೆ ಆರೋಪಿ ಹರೀಷ್ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಹರೀಶ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ