ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈಲು ಪ್ರಯಾಣದ ವೇಳೆ ಆಹಾರ ಸೇವಿಸಿದ 8 ಜನ ಯುವಕರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.
ಉತ್ತರ ಪ್ರದೇಶದ ಝಾನ್ಸಿ ಮೂಲದ 8 ಜನ ಗೋವಾದಲ್ಲಿ ಕೆಲಸ ಮಾಡಿಕೊಂಡಿದ್ದರು. ಊರಿಗೆ ಮರಳುತ್ತಿದ್ದ ಅವರು, ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಗೋವಾದಲ್ಲಿ ಊಟ ಸೇವಿಸಿದ್ದರು.
ಆದರೆ ಪ್ರಯಾಣ ಆರಂಭಿಸಿದ ಕೆಲವೇ ಸಮಯದಲ್ಲಿ ಎಲ್ಲರೂ ಅಸ್ವಸ್ಥರಾಗಿದ್ದು ಇವರಲ್ಲಿ ಆರು ಯುವಕರು ಅರೆಪ್ರಜ್ಞಾವಸ್ಥೆಗೆ ತಲುಪಿದರು. ಇನ್ನಿಬ್ಬರ ಸ್ಥಿತಿ ಕೂಡ ಚಿಂತಾಜನಕವಾಗಿತ್ತು. ಇವರ ಸ್ಥಿತಿ ನೋಡಿದ ಸಹ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ರೈಲು ಬೆಳಗಾವಿ ತಲುಪಿದಾಗ ಎಲ್ಲರನ್ನೂ ಕೆಳಗಿಳಿಸಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನಂತರ ರೈಲು ಬೆಳಗಾವಿಗೆ ಬರುತ್ತಿದ್ದಂತೆ ಸಹ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲ 8 ಯುವಕರನ್ನು ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ. ಜಿಲ್ಲಾ ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು, ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆಹಾರ ಸರಬರಾಜು ಮಾಡಿದವರ ವಿಚಾರಣೆ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ