Kannada NewsKarnataka NewsLatest

*814 ಪಿಯು ಉಪನ್ಯಾಸಕರ ನೇಮಕಕ್ಕೆ KEA ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಅಧಿಸೂಚನೆ ಹೊರಡಿಸಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು ಉಪನ್ಯಾಸಕರ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಡಿ.25 ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಡಿ.26 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕನ್ನಡ ವಿಷಯದಲ್ಲಿ 89 ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹಾಗೆಯೇ ಇಂಗ್ಲಿಷ್-145, ಇತಿಹಾಸ-50, ಅರ್ಥಶಾಸ್ತ್ರ-90, ರಾಜ್ಯಶಾಸ್ತ್ರ-25, ಸಮಾಜಶಾಸ್ತ್ರ-25, ಭೂಗೋಳ ಶಾಸ್ತ್ರ-10, ವಾಣಿಜ್ಯ ಶಾಸ್ತ್ರ-150, ಭೌತಶಾಸ್ತ್ರ-30, ರಸಾಯನಶಾಸ್ತ್ರ-30, ಗಣಿತ-30, ಜೀವಶಾಸ್ತ್ರ-30, ಕಂಪ್ಯೂಟರ್ ಸೈನ್ಸ್-110 ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಅರ್ಹತೆ ಸೇರಿದಂತೆ ಇತರ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ನೋಡಲು ಸಲಹೆ ನೀಡಿದ್ದಾರೆ.

Related Articles

Back to top button