Latest

ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ಆಯೋಜನೆಗೊಂಡಿದ್ದ ಸಮ್ಮೇಳನವನ್ನು ಮುಂದೂಡಲಾಗಿದೆ.

Home add -Advt

ಈ ಕುರಿತು ಮಾತನಾಡಿರುವ ಸಚಿವರು, ಕೊರೊನಾ ನಿಯಮಗಳ ಪಾಲನೆ ಕಷ್ಟಸಾಧ್ಯ ಎಂಬ ಕಾರಣಕ್ಕೆ ತಾತ್ಕಾಲಿಕವಾಗಿ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಫೆಬ್ರವರಿ ಅಂತ್ಯಕ್ಕೆ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟವಾಗಲಿದ್ದು, ಮಾರ್ಚ್ 9ರಂದು ಮತ್ತೊಂದು ಸಭೆ ನಡೆಸಿ ಸಮ್ಮೇಳನ ನಡೆಸುವ ದಿನಾಂಕ ತಿಳಿಸಲಾಗುವುದು ಎಂದು ಹೇಳಿದರು.

Related Articles

Back to top button