Latest

*86ನೇ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಸಾವು*

ಪ್ರಗತಿವಾಹಿನಿ ಸುದ್ದಿ; ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.

56 ವರ್ಷದ ಸಂಗನಗೌಡ ಮೃತ ಶಿಕ್ಷಕ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಂಗನಗೌಡ ಅವರು ರಾತ್ರಿ ಹಾವೇರಿಯ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದರು. ಇದ್ದಕ್ಕಿದ್ದಂತೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

Home add -Advt

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಂಗನಗೌಡ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದವರು. ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಗೆ ಬಂದಿದ್ದರು. ಈ ವೇಳೆ ದುರಂತ ಸಂಭವಿಸಿದೆ.

Related Articles

Back to top button