
ಪ್ರಗತಿವಾಹಿನಿ ಸುದ್ದಿ; ಚಂಡೀಗಢ: 88 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಾಲಕಿ ಮೇಲೆ ನೀಚ ಕೃತ್ಯವೆಸಗಿ ಬಳಿಕ ಸಿಕ್ಕಿಹಾಕಿಕೊಳ್ಳುವ ಭಿತಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಸಂತ್ರಸ್ತೆ ತಾಯಿ ತನ್ನ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾಳೆ ಎಂದು ತಿಳಿಯುತ್ತಿದ್ದಂತೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ ವೃದ್ಧನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐ ಆರ್ ದಾಖಲಾಗಿತ್ತು. ಶಿಕ್ಷೆಯಾದರೆ ಮರ್ಯಾದೆ ಹೋಗುತ್ತೆ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ತನ್ನದೇ ಕೋಣೆಯಲ್ಲಿ ವೃದ್ಧ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಬಸ್ ಅಪಘಾತ; ಸಾವನ್ನಪ್ಪಿದ್ದು 5 ಜನ, 12 ಮಂದಿ ಸ್ಥಿತಿ ಗಂಭೀರ; ಎಸ್ ಪಿ ರಾಹುಲ್ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ