*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆಗೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ನೌಕರರ ವೇತನ ಹಾಗೂ ಪಿಂಚಣಿದಾರರ ಭತ್ಯೆ ಪರಿಷ್ಕರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ವೇತನ, ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. *ಕಾಲೇಜಿನ ಮುಂದೆಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು*