Kannada NewsKarnataka NewsLatest

*ಶೌಚಾಲಯದಲ್ಲಿ ಕುಸಿದು ಬಿದ್ದ 8ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಹಾಸ್ಟೆಲ್ ಶೌಚಾಲಯದಲ್ಲಿಯೇ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ರಂಗಸಮುದ್ರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿರುವ ವಿದ್ಯಾರ್ಥಿನಿ.

ಕಾರಗಾನಹಟ್ಟಿ ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ ಪುತ್ರಿ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ ಚಿಕಿತ್ಸೆಗಾಗಿ ತನ್ನ ಸ್ವಗ್ರಾಮಕ್ಕೆ ತೆರಳಿದ್ದಳು. ಗುಣಮುಖಳಾದ ಬಳಿಕ ಆಗಸ್ಟ್ 7ರಂದು ಆಕೆ ಮರಳಿ ಹಾಸ್ಟೆಲ್‌ಗೆ ಬಂದಿದ್ದಳು. ಆದರೆ, ಶನಿವಾರ ಮುಂಜಾನೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ದಿಢೀರನೆ ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಅಸ್ವಸ್ಥಗೊಂಡು ಶೌಚಾಲಯದಲ್ಲೇ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button