ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಹುಬ್ಬಳ್ಳಿ -ಅಂಕೋಲಾ ರೈಲು ಯೋಜನೆಯ ಅನುಷ್ಠಾನ ಬಹುತೇಕ ಅಸಾಧ್ಯ ಎಂದು ರೈಲ್ವೆ ಸಚಿವರು ಹೇಳಿಕೆ ನೀಡಿದ ಬೆನ್ನಲ್ಲೇ ಜನೇವರಿ 9 ರಂದು ರಾಜ್ಯ ವನ್ಯಜೀವಿ ಮಂಡಳಿಯ ಸಭೆ ನಡೆಯಲಿದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಹುಬ್ಬಳ್ಳಿ -ಅಂಕೋಲಾ ರೈಲು ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆ ಇದೆ.
ದಟ್ಟ ಅರಣ್ಯದಲ್ಲಿ ಸಾಗುವ ರೈಲು ಮಾರ್ಗದ ಕುರಿತು ಪರ-ವಿರೋಧಿ ಹೇಳಿಕೆ, ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರಕಾರದ ನಿರ್ಧಾರ ಕುತೂಹಲ ಮೂಡಿಸಿದೆ.
ಹುಲಿಗಳ ಆವಾಸಸ್ಥಾನಕ್ಕೆ ಕಂಟಕಪ್ರಾಯವಾಗಬಲ್ಲ ಹುಬ್ಬಳ್ಳಿ -ಅಂಕೋಲಾ ರೈಲು ಯೋಜನೆಯನ್ನು ಕೈಬಿಡಬೇಕೆಂದು ವನ್ಯಜೀವಿ ಕಾರ್ಯಕರ್ತ ಗಿರಿಧರ ಕುಲಕರ್ಣಿ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ