ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯ ರಾಜಕೀಯದ ಇಂದಿನ ಬೆಳವಣಿಗೆ ಕುತೂಹಲ ಮೂಡಿಸಿದ್ದು, 9 ಗಂಟೆಗೆ ಸಿಎಂ ಕುಮಾರಸ್ವಾಮಿ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದ್ದು, ಅತೃಪ್ತ ಶಾಸಕರೆಲ್ಲಾ ಸಿಎಂ ಜೊತೆ ಪಾಲ್ಗೊಳ್ಳುತ್ತಾರೆಯೇ ಎನ್ನುವ ಕುತೂಹಲ ಮೂಡಿದೆ.
ಹಾಗಾದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ. ಇದೇ ವೇಳೆ, 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹ ಪತ್ರಿಕಾಗೋಷ್ಠಿ ಕರೆದಿದ್ದಾರೆ.
12.30ಕ್ಕೆ ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ