Politics

*ಹಾವೇರಿಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭಿರವಾಗಿದೆ. ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಬಳಿ ಅಪಘಾತದಲ್ಲಿ ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ದುರಂತದ ಸುದ್ದಿ ಕೇಳಿ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇನ್ನು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

Related Articles

Back to top button