
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಮಹಿಳೆಯೋಬ್ಬಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 9 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸೀಜ್ ಮಾಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯೊಬ್ಬರ ಲಗೇಜ್ ಚೆಕ್ ಮಾಡಿದ ಕಸ್ಟಮ್ಸ್ ಅಧಿಕಾರಿಗಳಿಗೆ 8 ಕೆಜಿ ಹೆರಾಯಿನ್ ಲಭ್ಯವಾಗಿದ್ದು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಹಿಳೆ ಮೆಡಿಕಲ್ ವೀಸಾ ಮೆಲೆ ಜಿಂಬಾಬ್ವೆಯಿಂದ ಬೆಂಗಳೂರಿಗೆ ಬಂದಿದ್ದು, ಬಂಧಿತ ಮಹಿಳೆ ಮಸ್ಮೂದಾ ಎಂದು ತಿಳಿದುಬಂದಿದೆ.
ಭಾರಿ ಸ್ಫೋಟ ಸದ್ದು; ಬೆಚ್ಚಿಬಿದ್ದ ರಾಜಧಾನಿಯ ಜನತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ