
ಪ್ರಗತಿವಾಹಿನಿ ಸುದ್ದಿ, ಹಾಸನ: ಅರಸಿಕೆರೆ ತಾಲೂಕು ಗಾಂಧಿನಗರ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿದ್ದಾರೆ.
ಧರ್ಮಸ್ಥಳದಿಂದ ವಾಪಸ್ ಬರುತ್ತಿದ್ದ ಟಿಟಿ ವಾಹನಕ್ಕೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಘಟನೆ ನಡೆದಿದೆ.
5 ಮಕ್ಕಳು ಸೇರಿದಂತೆ 9 ಜನರು ಸ್ಥಳದಲ್ಲೇ ಸಾವಿಗೀಡಾದರು. ಇನ್ನೂ 5-6 ಜನರು ಗಾಯಗೊಂಡಿದ್ದಾರೆ. ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಮೃತದೇಹಗಳು ಛಿದ್ರವಾಗಿವೆ, ವಾಹನ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷ ದರ್ಶಿಯೋರ್ವರು ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಬಾಣಾವರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.