Kannada NewsKarnataka NewsLatest

9 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಹಠಾತ್ ಬದಲಾವಣೆಗೆ ನಿರ್ಧಾರ

9 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಹಠಾತ್ ಬದಲಾವಣೆಗೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –

ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಕೂಡ ಪಕ್ಷವನ್ನು ಪುನರ್ ಸಂಘಟನೆ ಮಾಡಲು ನಿರ್ಧರಿಸಿದಂತಿದೆ. ರಾಜ್ಯದ 9 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷ ಬದಲಾವಣೆ ಮಾಡಲು ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ರಾಯಚೂರು, ದಕ್ಷಿಣಕನ್ನಡ, ವಿಜಯಪುರ, ಕೋಲಾರ, ಚಿಕ್ಕಮಗಳೂರು ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

ಚಿತ್ರದುರ್ಗಕ್ಕೆ ವಿಧಾನಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ, ದಾವಣಗೆರೆಗೆ ಮಾಜಿ ಶಾಸಕ ಪಿ.ಎಂ.ಅಶೋಕ, ಬಾಗಲಕೋಟೆಗೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ರಾಯಚೂರಿಗೆ ಮಾಜಿ ಸಚಿವ ಆರ್.ಬಿ.ತುಮ್ಮಾಪುರ, ದಕ್ಷಿಣಕನ್ನಡಕ್ಕೆ ಮಾಜಿ ಸಚಿವ ತನ್ವಿರ್ ಸೇಠ್, ವಿಜಯಪುರಕ್ಕೆ ಮಾಜಿ ಶಾಸಕ ಡಿ.ಆರ್.ಪಾಟೀಲ, ಕೋಲಾರಕ್ಕೆ ವಿಧಾನಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಚಿಕ್ಕಮಗಳೂರಿಗೆ ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ  ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣಕ್ಕೆ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಕರಾಗಿ ನೇಮಕವಾಗಿದ್ದಾರೆ.

ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಸೆಪ್ಟಂಬರ್ 10ರೊಳಗೆ ವರದಿ ನೀಡುವಂತೆ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಷಫಿವುಲ್ಲಾ ಸೂಚಿಸಿದ್ದಾರೆ. ಈ ಸಂಬಂಧ ಹೊರಡಿಸಿರುವ ಸುತ್ತೋಲೆ ಪ್ರಗತಿವಾಹಿನಿಗೆ ಲಭ್ಯವಾಗಿದೆ.

ಹಲವಾರು ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಅವಧಿ ಮುಕ್ತಾಯವಾಗಿಲ್ಲ. ಆದರೂ ಈ ಮಧ್ಯಂತರ ಬದಲಾವಣೆ ಕೆಲವರಿಗೆ ಶಾಕ್ ನೀಡಿದೆ. ಇದು ಮುಂದಿನ ದಿನಗಳಲ್ಲಿ ಅಸಮಾಧಾನ ಹೊಗೆಯಾಡಲು ಕಾರಣವಾಗಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button