*ಒಂದೆ ಕುಟುಂಬದ 9 ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಟು ಶ್ಯಾಮ್ ದೇವಸ್ಥಾನದ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿರುವ ದಾರುಣ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಕೂಡ ಸೇರಿದ್ದಾರೆ. ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯ ಶಂಭುಪುರ ಗ್ರಾಮದ ಸಮೀಪ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಖಾಟು ಶ್ಯಾಮ್ ದೇವಸ್ಥಾನದಿಂದ ಭಕ್ತರನ್ನು ಹೊತ್ತು ಬರುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ … Continue reading *ಒಂದೆ ಕುಟುಂಬದ 9 ಜನ ದುರ್ಮರಣ*