*ಕೊಲೆ ಪ್ರಕರಣದಲ್ಲಿ 9 ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ*
ಪ್ರಗತಿವಾಹಿನಿ ಸುದ್ದಿ; ಕೇರಳದ ಕಣ್ಣೂರು ಜಿಲ್ಲೆಯಲ್ಲಿ 19 ವರ್ಷಗಳ ಹಿಂದೆ ನಡೆದ ಅಪರಾಧ ಸಿಪಿಐ ಕಾರ್ಯಕರ್ತ ರಿಜಿತ್ ಶಂಕರನ್ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಲಕ್ಕೇರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ ಸದಸ್ಯ ರಿಜಿತ್ ಅವರನ್ನು ಅಕ್ಟೋಬರ್ 3, 2005 ರಂದು ರಿಜಿತ್ ಅವರು ಮನೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಚುಂಡಾದ ದೇವಸ್ಥಾನದ ಬಳಿ ಹೊಂಚು ಹಾಕಿ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ ರಿಜಿತ್ ಅವರ ಸ್ನೇಹಿತರ ಮೇಲೆ ಕೂಡ ಹಲ್ಲೆ ನಡೆಸಲಾಗಿತ್ತು, ಈ ವೇಳೆ ಸಿಪಿಐ ಕಾರ್ಯಕರ್ತ ರಿಜಿತ್ ಶಂಕರನ್ ಸಾವನ್ನಪ್ಪಿದ್ದರು, ಬಳಿಕ ಜನವರಿ 4ರಂದು ತಲಕ್ಕೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಬತ್ತು ಅಪರಾಧಿಗಳಲ್ಲಿ ಸುಧಾಕರನ್ (57), ಜಯೇಶ್ (41), ರಂಜಿತ್ (44), ಅಜೀಂದ್ರನ್ (51), ಅನಿಲ್‌ಕುಮಾರ್ (52), ರಾಜೇಶ್ (46), ಶ್ರೀಕಾಂತ್ (47), ಅವರ ಸಹೋದರ ಶ್ರೀಜಿತ್ (43), ಮತ್ತು ಭಾಸ್ಕರನ್ ( 67) ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ 19 ವರ್ಷಗಳ ಹಿಂದೆ ನಡೆದ ಅಪರಾಧ ರಿಜಿತ್ ಶಂಕರನ್ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಲಕ್ಕೇರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ